ಶಿಕ್ಷಣಸುದ್ದಿ

ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್; 5, 8,9 ಮತ್ತು11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ವಿದ್ಯಾರ್ಥಿಗಳಿಗೆ ಹೈಕೋರ್ಟ್‌ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಜಡ್ಜ್‌ ರವಿ ಹೊಸಮನಜ ಅವರಿದ್ದ ನ್ಯಾಯಪೀಠ ಮಹತ್ವದ ಆದೇಶ ನೀಡಿದೆ.

ಕಳೆದ ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡುವ ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಶಾಲೆಯ ಒಕ್ಕೂಟ ಕುಸುಮ ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ 5, 8,9 ಮತ್ತು11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು ಮಾಡಿ ಆದೇಶ ನೀಡಿದೆ. ಬೋರ್ಡ್​ ಪರೀಕ್ಷೆಗಳಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ರೆ, ಪೋಷಕರು, ರುಪ್ಸಾ ಸಂಘಟನೆಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಆದೇಶ ಪ್ರಶ್ನಿಸಿ ಕಾನೂನು ಸಮರ ಸಾರಿದ್ದ ಖಾಸಗಿ ಶಾಲೆಯ ಸಂಘಟನೆ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಲಾಗಿದೆ.

Comments (0)

Your email address will not be published. Required fields are marked *

Back to top button