Tuesday, June 24, 2025
26.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಬೆಂಗಳೂರಿನಲ್ಲಿ ಗುಂಡಿನ ಸದ್ದು: ಹಣಕ್ಕಾಗಿ ಚಿನ್ನದ ಅಂಗಡಿಗೆ ನುಗ್ಗಿ ಫೈರ್!

ಬೆಂಗಳೂರಿನಲ್ಲಿ ಗುಂಡಿನ ಸದ್ದು: ಹಣಕ್ಕಾಗಿ ಚಿನ್ನದ ಅಂಗಡಿಗೆ ನುಗ್ಗಿ ಫೈರ್!

ರಾಜಧಾನಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊರೆದಿದೆ. ದರೋಡೆಗೆಂದು ಜುವೆಲ್ಲರಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಹಾಡಹಗಲೇ ಈ ಘಟನೆ ನಡೆದಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂದಾರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ಅವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಪಿಸ್ತೂಲು ತೋರಿಸಿಯೇ ಹಣ ಕೇಳಿದ್ದಾರೆ. ಆದರೆ, ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.

ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಜನರು ಓಡಿಬಂದಿದ್ದಾರೆ. ಆಗ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜುವೆಲ್ಲರಿಯ ಸಿಸಿ ಟಿವಿ ಫೂಟೇಜ್ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿ ಟಿವಿ ಫೂಜೇಜ್ನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಹಿಡಿಯುವ ಭರವಸೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments