Friday, August 22, 2025
24.8 C
Bengaluru
Google search engine
LIVE
ಮನೆರಾಜಕೀಯಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

ಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ಜೊತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ಹೆಚ್ಚುವರಿಯಾಗಿ ಕೊಡುತ್ತಿದ್ದೆ. ಆ 4 ಸಾವಿರ ನಿಂತು ಹೋಗಿದೆ ಎಂದು ಟೀಕಿಸಿದರು. ಸರಕಾರ ದಿವಾಳಿ ಆಗಿರುವುದಕ್ಕೆ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.

”ಬಿಜೆಪಿ-ಜೆಡಿಎಸ್ ಬೇರೆ ಅಲ್ಲ. ನಾವೆಲ್ಲ ಒಂದೇ ತಾಯಿ ಮಕ್ಕಳಂತೆ” ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಯಾರೇ ಇರಲಿ, ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪಣ ತೊಡಿ. ಆಗ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಪ್ರಯತ್ನವನ್ನು ತಡೆಯಲು ಯಾರಿಂದಲೂ ಅಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶ- ವಿದೇಶಗಳಲ್ಲಿ ನಿರಂತರ ಪ್ರವಾಸ ಮಾಡುತ್ತಿರುವ, ಒಂದು ದಿನ ರಜೆ ಪಡೆಯದೆ ದೇಶದ ಅಭಿವೃದ್ಧಿಗೆ ಶ್ರಮಿಸುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಮತ್ತು ಈ ಹರೆಯದಲ್ಲೂ ಅತ್ಯಂತ ಉತ್ಸಾಹದಿಂದ ರಾಜ್ಯ ಪ್ರವಾಸ ಮಾಡಲು ಸಿದ್ಧರಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದರಲ್ಲದೆ, ಕಾಯಾ, ವಾಚಾ, ಮನಸಾ ಕೆಲಸ ಮಾಡಿ 28ಕ್ಕೆ 28 ಕ್ಷೇತ್ರ ಗೆಲ್ಲೋಣ ಎಂದು ಮನವಿ ಮಾಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments