ಬೆಂಗಳೂರು : 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ನ ಮೆಟ್ಟಿಲೇರಿತ್ತು.
5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಪರೀಕ್ಷೆ ನಡೆಸದಂತೆ ತಡೆ ನೀಡಿದೆ. ಎಕ್ಸಾಂ ರದ್ದಾಗಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕೊನೆಗೂ ರೂಪ್ಸಾಗೆ ಜಯ ಸಿಕ್ಕಿದೆ.