Thursday, November 20, 2025
19.1 C
Bengaluru
Google search engine
LIVE
ಮನೆಸುದ್ದಿಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್​ ವಿಪಿನ್​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್​ ವಿಪಿನ್​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ; ಕರ್ನಾಟಕ  ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್​ ವಿಪಿನ್​​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್​​ ಚಂದ್​​ ಗೆಹ್ಲೋಟ್​, ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್​.ಕೆ ಪಾಟೀಲ್​, ವಿಧಾನ ಪರಿಷತ್​​ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾಜಿ ಕೇಂದ್ರದ ಸಚಿವರಾದ ಡಾ.ಎಂ ವೀರಪ್ಪ ಮೊಯಿಲಿ, ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್​​ ಗೋಯಲ್​, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ  ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments