ಬೆಂಗಳೂರು : ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ವರದಿಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆಯಲ್ಲಿ ವಾಹನ ದಟ್ಟಣೆ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು 6 ನೇ ಸ್ಥಾನಕ್ಕೆ ಇಳಿದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು. ಬೆಂಗಳೂರು ನಗರ 2022 ರಲ್ಲಿ ವಾಹನ ದಟ್ಟಣೆಯಲ್ಲಿ ಎರಡನೇ ಸ್ಥಾನದಲ್ಲಿ ಎಂದು ವರದಿಯಾಗಿತ್ತು. 2023 ರಲ್ಲಿ 6 ನೇ ಸ್ಥಾನಕ್ಕೆ ಇಳಿದಿದೆ ಎಂದು ವರದಿಯಲ್ಲಿ ತಿಳಿಸಿದೆ.
ಹಲವು ಸುಧಾರಣೆಯ ಮೂಲಕ ಸಂಚಾರ ದಟ್ಟಣೆಯನ್ನು ನಿಯಂತ್ರಣ ತರಲಾಗಿದೆ. ವಾಹನ ಸಂಚಾರಕ್ಕೆ ಜಂಕ್ಷನ್ ಗಳಲ್ಲಿ ಕರ್ತವ್ಯ ನಿರತ ಸಿಬ್ಬಂದಿ, ಅಧಿಕಾರಿಗಳು ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದಾರೆ. ಅತ್ಯಾಧುನಿಕ (ಡ್ರೋಣ್ ಮೂಲಕ ಟ್ರಾಫಿಕ್ ನಿಯಂತ್ರಣ, ಸಿಸಿಟಿವಿ ಇತರೆ) ತಂತ್ರಜ್ಞಾನ ಬಳಸಲಾಗಿದೆ. ನಮ್ಮ ಮೆಟ್ರೋ ಸಂಪರ್ಕವನ್ನು ಸುಧಾರಿಸಲಾಗಿದೆ. ಟ್ರಾಫಿಕ್ ಬಸ್ ಸ್ಟಾಪ್ ಸ್ಥಳಾಂತರ, ಯೂಟರ್ನ್ ಮುಚ್ಚುವಿಕೆ, ಸಿಗ್ನಲ್ ಹಂತ ಬದಲಾವಣೆ ಹೀಗಾಗಿ ವಿವಿಧ ಕ್ರಮಗಳಿಂದ ವಾಹನ ದಟ್ಟಣೆ ಪ್ರಮಾಣ ಕಡಿಮೆಯಾಗಿದೆ. ಸರಾಸರಿಯಲ್ಲಿ ವಾಹನ ಸಂಚಾರ 2022 ರಲ್ಲಿ 14 ಕಿಮಿ ಸಂಚರಿಸುತ್ತಿದ್ದು, 2023 ರಲ್ಲಿ 18 ಕಿ ಮೀ ಸಂಚರಿಸುತ್ತಿದೆ. ಟಾಪ್ 10 ಪಟ್ಟಿಯಲ್ಲಿ 2022 ಕ್ಕೆ ಹೋಲಿಸಿದರೆ 2023 ಪ್ರಯಾಣ ದರ 1 ನಿಮಿಷ ಕಡಿಮೆಯಾಗಿದೆ. ಪ್ರಯಾಣದ ಸಮಯ ಕಡಿಮೆ ಮಾಡಿದ ಟಾಪ್ 10 ಪಟ್ಟಿಯಲ್ಲಿ ಬೆಂಗಳೂರು ನಂಬರ್ ಒನ್ ನಲ್ಲಿದೆ.
ಸಬ್ಸಿಡಿ ದರದಲ್ಲಿ ಕಾರು, ಸೈಟ್ ಕೊಡಿಸುವುದಾಗಿ ವಂಚನೆ : ಆರೋಪಿಗಳು ಅರೆಸ್ಟ್
ಬಿಬಿಎಂಪಿಯಿಂದ ಬಬ್ಸಿಡಿ ದರಲ್ಲಿ ಕಾರು ಮತ್ತು ಸೈಟ್ ಕೊಡಿಸುವುದಾಗಿ ವಂಚಿಸಿದ್ದ ಇ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಸಬ್ಸಿಡಿ ದರಲ್ಲಿ ಕಾರು. ಸೈಟ್, ಯುವಕರಿಗೆ ಕೆಲಸ ವಿಧವೆಯರಿಗೆ ಮಾಸಾಸನ ಮತ್ತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಕೊಡಿಸುವುದಾಗಿ 60 ಕ್ಕೂ ಹೆಚ್ಚು ಜನರಿಂದ ಹಣ ಪಡೆದು ವಂಚಿಸಿದ್ದರು ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.
ಆರೋಪಿಗಳೂ ಹಣವನ್ನು ನೇರವಾಗಿ ತಮ್ಮ ಅಕೌಂಟ್ಗಳೀಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು. ಆರೋಪಿಗಳೂ ಸುಮಾರು 15 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಉತ್ತರ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರು ಆರೋಪಿಗಳನನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದರು.