ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದಿದ್ದಾರೆ. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ. ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಬಾಗಿಲು ಬಡಿದಿದ್ದೇವೆ
ಎಂದರು.