ರಾಜ್ಯ ಸರ್ಕಾರದ ವತಿಯಿಂದ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಮಧ್ಯಹ್ನಾ 2ಗಂಟೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್ ಸಿ ಮಹದೇವಪ್ಪರವರ ನೇತೃತ್ವದಲ್ಲಿ ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳು, ಸರ್ಕಾರಿ ಅಧಿಕಾರಿಗಳು, ಹಾಗೂ ವಿಶೇಷ ಆಹ್ವಾನಿತರಿಂದ ಉದ್ಘಾಟನೆಗೊಳ್ಳಲಿದೆ.
ಈ ಸಂವಿಧಾನದ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಕಾರ್ಯಕರ್ತರು, ವಿದ್ಯಾರ್ಥಿಗಳು, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ. ಸಂವಿಧಾನದ ಬಗ್ಗೆ ಅರಿತು, ಅರಿವು ಮೂಡಿಸೋಣ ಎಂಬುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಭಾರತ ಸಂವಿಧಾನ ದಿನವು ಅಪಾರ ಐತಿಹಾಸಿಕ ಹಾಗೂ ಸಾಂಕೇತಿಕ ಮಹತ್ವವನ್ನು ಹೊಂದಿದೆ. ಇದು ಭಾರತೀಯ ಸಂವಿಧಾನ ಅಂಗೀಕಾರವನ್ನು ಗುರುತಿಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಪ್ರಾಮುಖ್ಯತೆ ಪಡೆಯುತ್ತದೆ. ಹೀಗಾಗಿ ಎಲ್ಲರೂ ತಪ್ಪದೇ ಬೆಂಗಳೂರಿನ ಅರಮನೆ ಮೈದಾನಕ್ಕೆ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಲು, ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.


