ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು.
ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ ಅವರು ಬಿಬಿಎಂಪಿ ಕೇಂದ್ರ ವಲಯದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸೌಮ್ಯ ರೆಡ್ಡಿಗೆ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಉಮಾಪತಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.