ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ ಡಿ.ಕೆ ಸುರೇಶ್ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿ ಚುನಾವಣ ತಂತ್ರಗಾರಿಕೆಗಳ ಕುರಿತು ಚರ್ಚಿಸಿದ್ದಾರೆ.
ಇನ್ನು ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ,ಸಂಸದ ಡಿ.ಕೆ ಸುರೇಶ್ ಹಾಗೂ ಬೆಂಗಳೂರು ಗ್ರಾಮಾಂತರ ಶಾಸಕರು, ‘ಕೈ’ ಮುಖಂಡರು ಭಾಗಿಯಾಗಿದ್ದರು.