ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರ ಸಮನ್ವಯ ಸಮಿತಿ ಸಭೆ ನಡೆಯಿತು.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ ಮತ್ತಿತರ ಆಹ್ವಾನಿತ ಪ್ರಮುಖರು ಭಾಗವಹಿಸಿದ್ದರು.