ಬೆಂಗಳೂರು: ಪ್ಯಾಂಟ್ನಲ್ಲಿ ಚಿನ್ನದ ಪುಡಿ ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಶಾರ್ಜಾದಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಪ್ಯಾಂಟಿನೊಳಗೆ ಪದರ ಮಾಡಿ 367.7 ಚಿನ್ನದ ಪುಡಿ ಇಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ 22.58 ಲಕ್ಷದ ಚಿನ್ನದ ಪುಡಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.