ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಯಿತು.
ಅರೊಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
12 ವರ್ಷದಿಂದ ನಮ್ಮ ದೇಶದಲ್ಲಿ ಪೊಲೀಯೋ ರಹಿತ ದೇಶವಾಗಿದೆ ಇದು ಹೀಗೆ ಮುಂದುವರೆಸುವುದು ನಮ್ಮ ಜವಾಬ್ದಾರಿ. ಈ ವರ್ಷ ಇಡೀ ದೇಶಾದ್ಯಂತ 62 ವರೆ ಲಕ್ಷ ಮಕ್ಕಳಿಗೆ ಪೊಲೀಯೋ ಗಾಕಿಸುವ ಗುರಿಯಿದೆ.
ಬೆಂಗಳೂರಿನಲ್ಲಿ 11ವರೆ ಲಕ್ಷ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕಿಸುವ ಕೆಲಸ ಮಾಡಲಾಗುತ್ತಿದೆ ಇನ್ನ ಮೂರು ದಿನಗಳಲ್ಲಿ ನಮ್ಮ ಟಾರ್ಗೆಟ್ ಮುಟ್ಟಬೇಕು. ಅಂಗನವಾಡಿ ಕಾರ್ಯಕರ್ತರು, ವೈದ್ಯರು ಈ ಕೆಲಸಕ್ಕೆ ಶ್ರಮಿಸುತ್ತಿದ್ದಾರೆ. 5 ವರ್ಷದವರೆಗೂ ಮಕ್ಕಳಿಗೆ ಪೊಲೀಯೋ ವ್ಯಾಕ್ಸಿನ್ ಕಡ್ಡಾಯ ಎಂದು ಹೇಳಿದರು.