Freedom TV

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್​ಗೆ ಬಿಜೆಪಿ ದೂರು

ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾಗಿ ಗಮನಕ್ಕೆ ತರಲಾಯಿತು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಎಚ್.ಎನ್. ಚಂದ್ರಶೇಖರ್, ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಈ ದೂರನ್ನು ಸಲ್ಲಿಸಿದರು.

Comments (0)

Your email address will not be published. Required fields are marked *

Back to top button