Monday, June 23, 2025
26.6 C
Bengaluru
Google search engine
LIVE
ಮನೆರಾಜಕೀಯಕುಮಾರಸ್ವಾಮಿ ಯಾರಿಗೆಲ್ಲ ಧಮ್ಕಿ ಹಾಕವ್ರೆ..ಫೋನ್ ಮಾಡವ್ರೆ ಗೊತ್ತಿದೆ ನನಗೆ ; ಡಿಕೆ ಶಿವಕುಮಾರ್

ಕುಮಾರಸ್ವಾಮಿ ಯಾರಿಗೆಲ್ಲ ಧಮ್ಕಿ ಹಾಕವ್ರೆ..ಫೋನ್ ಮಾಡವ್ರೆ ಗೊತ್ತಿದೆ ನನಗೆ ; ಡಿಕೆ ಶಿವಕುಮಾರ್

ಬೆಂಗಳೂರು: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮ್ಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾತಾಡಿದ ಡಿಕೆಶಿ “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ, ಎಲ್ಲವೂ ನನಗೆ ಮಾಹಿತಿ ಬಂದಿದೆ.. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.” ಎಂದು ಹೇಳಿದರು..

ಶಾಸಕ ಸೋಮಶೇಖರ್ ಪದೇ ಪದೇ ಕಾಂಗ್ರೆಸ್ ಸಭೆಗಳಲ್ಲಿ ಕಾಣಿಸುತ್ತಿರುವ ಬಗ್ಗೆ ಪ್ರತಿಕ್ರಿಯೆಸಿರುವ ಡಿಕೆಶಿ “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ಹೇಳಿದ್ರು…

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ

ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಎಂದು ಗುಡುಗಿದರು. ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು:

ಸಚಿವರು ಲೋಕಸಭೆ ಚುನಾವಣೆಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ಹೇಳಿದರು.

ಬರ ನಿರ್ವಹಣೆಗೆ ಅಗತ್ಯ ಕ್ರಮ:

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments