Wednesday, April 30, 2025
24 C
Bengaluru
LIVE
ಮನೆರಾಜಕೀಯ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ಯುಟರ್ನ್ ಹೊಡೆದ್ರಾ ಡಿಕೆ ಸುರೇಶ್?

‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ಯುಟರ್ನ್ ಹೊಡೆದ್ರಾ ಡಿಕೆ ಸುರೇಶ್?

ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಇದರ ವಿರುದ್ಧ ದೇಶಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ತಮ್ಮ ಹೇಳಿಕೆಯನ್ನು ಜನರ ಮೇಲೆ ಹೇರಿ ಕೈತೊಳೆಯುವ ಪ್ರಯತ್ನ ಮಾಡಿದ್ದರು. ಇದೀಗ ತನ್ನ ಹೇಳಿಕೆಯನ್ನು ತಿರುಚುತ್ತಿದ್ದಾರೆ ಎಂದು ಹೇಳುವ ಮೂಲಕ ಯುಟರ್ನ್ ಹೊಡೆದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಸುರೇಶ್, ನನ್ನ ಹೇಳಿಕೆಗಳನ್ನ ಬಿಜೆಪಿಯವರು ತಿರುಚುತ್ತಿದ್ದಾರೆ. ದೇಶವಿಭಜನೆ ಬಗ್ಗೆ ನಾನು ಹೇಳಿಲ್ಲ. ಹೋರಾಟ ಮಾಡಲು ಎಲ್ಲರಿಗೂ ಹಕ್ಕಿದೆ. ಬಿಜೆಪಿ ಕಾರ್ಯಕರ್ತರ ಹೋರಾಟಕ್ಕೆ ನನ್ನ ಸಹಕಾರ ಇದೆ. ದೇವರು ಅವರಿಗೆ ಒಳ್ಳೇದನ್ನ ಮಾಡಲಿ ಎಂದರು. ಅಲ್ಲದೆ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಿದರೆ ತಪ್ಪೇನಿದೆ. ನನ್ನ ಹೇಳಿಕೆಗಳು ಬಹಳ ಸ್ಪಷ್ಟವಾಗಿದೆ. ಬಿಜೆಪಿ ಕಾರ್ಯಕರ್ತರ ಹೋರಾಟದಲ್ಲಿ ತಪ್ಪೇನಿದೆ? ಹೋರಾಟಗಳು, ಪ್ರತಿಭಟನೆ ಪ್ರಜಾಪ್ರಭುತ್ವದ ಭಾಗ ಎಂದರು.

ಡಿಕೆ ಬ್ರದರ್ಸ್ ಮನೆಗೆ ಬಿಜೆಪಿ ಮುತ್ತಿಗೆ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಇದೆ. ಯಾರನ್ನ ತಡೆಯಲು ಸಾಧ್ಯವಿಲ್ಲ. ಬಿಜೆಪಿ ಹೋರಾಟಕ್ಕೆ ಸಂಪೂರ್ಣ ಸಹಕಾರ ಸರ್ಕಾರ ಕೊಡುತ್ತದೆ. ನಾನು ಬಿಜೆಪಿ ಪ್ರತಿಭಟನೆಯನ್ನು ಸ್ವಾಗತ ಮಾಡುತ್ತೇನೆ. ದೇವರು ಬಿಜೆಪಿಗೆ ಒಳ್ಳೆಯದು ಮಾಡಲಿ ಎಂದರು.

ಈ ದೇಶ ವಿಭಜನೆ ಆಗಬೇಕು ಅಂತ ಹೇಳಿಲ್ಲ. ನನ್ನ ಹೇಳಿಕೆ ಬಹಳ ಸ್ಪಷ್ಟವಾಗಿದೆ. ಹಾಗಾಗಿ ಬಿಜೆಪಿಯವರಿಗೆ ಉತ್ತರ ಕೊಡುವ ಅವಶ್ಯಕತೆಯಿಲ್ಲ. ಅವರ ಹೋರಾಟ ಯಶಸ್ವಿಯಾಗಲಿದೆ. ಅವರವರ ಭಾವನೆ ಹೇಳಲು ಎಲ್ಲರಿಗೂ ಹಕ್ಕಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments