ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ.
ಇಂದು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶುಕ್ರವಾರ ಬಿ ಫಾರಂ ವಿತರಿಸಿದರು.