Thursday, November 20, 2025
22.5 C
Bengaluru
Google search engine
LIVE
ಮನೆUncategorizedಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಈ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments