ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಹೀಗಾಗಿ ಅಮೃತ ಮಹೋತ್ಸವವನ್ನು ಕರ್ನಾಟಕ ಸರ್ಕಾರ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ಎರಡು ದಿನಗಳ ಕಾಲ ರಾಷ್ಟ್ರೀಯ ಏಕತಾ ಸಮಾವೇಶ ಆಯೋಜಿಸಿದೆ. ಫೆಬ್ರವರಿ 24ರಂದು ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, ಇಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಸಮಾವೇಶದ ಸಿದ್ದತೆ ಕಾರ್ಯವನ್ನು ಪರಿಶೀಲಿಸಿದ್ರು.
ಬೆಂಗಳೂರು ಅರಮನೆ ಮೈದಾನಕ್ಕೆ ಭೇಟಿ ನೀಡಿ ಸಿದ್ದತೆಯನ್ನ ವೀಕ್ಷಣೆ ಮಾಡಿದ್ರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್ ,ಇಲಾಖೆ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಪರಿಶೀಲನೆ ಬಳಿಕ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಜನರಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸಮಾವೇಶ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ದೇಶದ ಗಣ್ಯರು ಭಾಗಿಯಾಗುತ್ತಿದ್ದಾರೆ. ಈಗಾಗಲೇ ಗಣ್ಯರಿಗೆ ಅಹ್ವಾನ ನೀಡಲಾಗಿದೆ. ಕಳೆದ ಒಂದು ತಿಂಗಳಿಂದ ಜಾಥಾ ನಡೆಸಿ ಸಂವಿಧಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಲಾಗಿದೆ.
ಭಾರತೀಯರೆಲ್ಲರೂ ಒಂದೇ . ಹೀಗಿರುವಾಗ ಜಾತಿ, ಧರ್ಮ ಧ್ವನಿ ಮಾಡುತ್ತಿದೆ. ದೇಶದಲ್ಲಿ ಅಸಮಾನತೆ ಹೆಚ್ಚಾಗಿದೆ. ಹೀಗಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರ ಸಮಾವೇಶ ಆಯೋಜನೆ ಮಾಡಿದೆ ಎಂದು ತಿಳಿಸಿದರು.