ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಸದ್ಯ ಹೆಚ್.ಡಿ ದೇವೇಗೌಡರನ್ನು ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಳೆದು ಮೂರು ದಿನಗಳಿಂದ ಹಿರಿಯ ವೈದ್ಯ ಡಾ. ಸತ್ಯನಾರಾಯಣ ಮೈಸೂರು ನೇತೃತ್ವದಲ್ಲಿ ಹೆಚ್.ಡಿ ದೇವೇಗೌಡರು ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಪದ್ಮನಾಭನಗರದ ನಿವಾಸಕ್ಕೆ ಹೆಚ್.ಡಿ ದೇವೇಗೌಡರನ್ನು ಕಳುಹಿಸಲಾಗಿದೆ.
ದೆಹಲಿಗೆ ಪ್ರಯಾಣಿಸಿದ ಬಳಿಕ ವಿಪರೀತ ಚಳಿಯ ಕಾರಣ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಕಳೆದ 3 ದಿನಗಳಿಂದ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಗೌಡರಿಗೆ ಅತಿಯಾದ ಕೆಮ್ಮಿನಿಂದ ಶ್ವಾಸಕೋಶದಲ್ಲಿ ಇನ್ಫೆಂಕ್ಷನ್ ಆಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.. ಸದ್ಯ ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು ಅವರನ್ನು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.


