Wednesday, April 30, 2025
32 C
Bengaluru
LIVE
ಮನೆರಾಜಕೀಯನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ನಿಧನ

ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ನಿಧನ

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್​ ಪರೀಕ್ಷೆ ಬರೆದು ಐಎಎಸ್​ ಅಧಿಕಾರಿಯಾಗಿದ್ದ, ನಟ ಕೆ,ಶಿವರಾಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ವೃತ್ತಿಯಲ್ಲಿ IAS ಅಧಿಕಾರಿಯಾಗಿದ್ದ ಶಿವರಾಮ್​ ಅವರು ಕನ್ನಡದಲ್ಲಿ IAS ಪರಿಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರಾಗಿ ಹೆಗ್ಗಳಿಕೆ ಪಡೆದಿದ್ದರು.  IAS ಅಧಿಕಾರಿಯಾಗಿ ಬೆಂಗಳೂರು, ಕೊಪ್ಪಳ, ವಿಜಯಪುರ, ಮೈಸೂರು ದಾವಣಗೆರೆ ಸೇರಿದಂತೆ ಹಲವು ಕಡೆ ಸೇವೆ ಸಲ್ಲಿಸಿದ್ದರು. ಸಿನಿಮಾ ರಂಗ ಮಾತ್ರವಲ್ಲದೇ ರಾಜಕೀಯದಲ್ಲಿಯೂ ಸಕ್ರೀಯರಾಗಿದ್ದರು.

1993 ರಲ್ಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟದ್ದ ಶ್ರೀರಾಮ್​ ಅವರು ನಾಗತಿಹಳ್ಳೀ ನಿರ್ದೇಶನದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ -3 , ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್​ ಫಾರ್​​ ಲವ್​ ಹಾಗೂ ಟೈಗರ್​​ ಸಿನಿಮಾಗಳಲ್ಲಿ ನಟಿಸಿದ್ದರು.

2013 ರಲ್ಲಿ ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್​ ಸೇರಿ ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ. ಸೋಲುಂಡಿದ್ದರು. ಬಳಿಕ ಕಾಂಗ್ರೆಸ್​ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments