ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ.
ವೇಗವಾಗಿ ಬಂದ ಲಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಅದರಲ್ಲೂ ಓರ್ವ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.