ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್ ನಡುವೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಎಂಆರ್ಸಿಎಲ್, ಏಪ್ರಿಲ್ 1 ರಿಂದ ಒಂದು ವರ್ಷ ಈ ಮಾರ್ಗಗಳ ನಡುವೆ ಸಂಚಾರ ಬಂದ್ ಮಾಡಲಾಗುತ್ತದೆ.
ಬನ್ನೇರುಘಟ್ಟ ಮುಖ್ಯರಸ್ತೆಯ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಮತ್ತು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಬಾಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸುವಂತೆ ಬಿಎಂಆರ್ಸಿಎಲ್ ತಿಳಿಸಿದೆ.