ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ ಲೋಕಾಯುಕ್ತ ಬಲೆಗೆ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ. ಒಂದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಸಿಕ್ಕಿಬಿದ್ದಿದ್ದಾರೆ.
ವಂಚನೆ ಪ್ರಕರಣ ಸಂಬಂಧವಾಗಿ ಹಣಕ್ಕೆ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ವಂಚನೆ ಪ್ರಕರಣವೊಂದರಲ್ಲಿ ಆರೋಪಿಯನ್ನ ವಶಕ್ಕೆ ಪಡೆದಿದ್ದ ಪೊಲೀಸರು, ವಶದಿಂದ ಬಿಡಲು ಐದು ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಇದರಲ್ಲಿ ಐವತ್ತು ಸಾವಿರ ಮೊದಲು ಪಡೆದಿದ್ದರು, ಇಂದು ಒಂದು ಲಕ್ಷ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ.