ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ವತಿಯಿಂದ ಇದನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರವನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಾಧಿಕಾರಿಗಳು ಆದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮ ರಾವ್, ವಿಶೇಷ ಅಧಿಕಾರಿ IT & ಮಾಧ್ಯಮ ಎ ವಿ ಸೂರ್ಯ ಸೇನ್, ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಅವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಾರ್ತಾ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿದ್ದರು.