ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಆರ್ ಜಿ ರಾಯಲ್ ಹೋಟೆಲ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಕೆ ಗೋಪಾಲಯ್ಯರವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು.
ಈ ಸಭೆಯಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ಬೆಂಗಳೂರು ಉತ್ತರ ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ನರೇಂದ್ರಬಾಬು, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್ ಹರೀಶ್, ಜೆಡಿಎಸ್ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ರಾದ ರಮೇಶ ಗೌಡ, ,ಚಂದ್ರೇಗೌಡ, ಮಾಜಿ ಬಿಬಿಎಂಪಿ ಸದಸ್ಯರಾದ ಭದ್ರೆ ಗೌಡ ಎಂ, ಮಹಾದೇವ, ರಾಜೇಂದ್ರಕುಮಾರ್ ,ಏಚ್ ಎನ್ ದೇವರಾಜ್ ಉಪಸ್ಥಿತರಿದ್ದರು.
ಈ ಸಭೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಎರಡು ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಾಯಿತು.