Freedom TV

ಮಹಿಳೆ ಎದುರೇ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ : ದೂರು ದಾಖಲು

ಬೆಂಗಳೂರು: ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗ ಸ್ಪರ್ಶಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್‌ನಲ್ಲಿ ನಡೆದಿದೆ.

ಎರಡು ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಈ ಕುರಿತು ಸಂತ್ರಸ್ತ ಮಹಿಳೆ ನಮ್ಮ ಮೆಟ್ರೋಗೆ ದೂರು ನೀಡಿದ್ದಾರೆ. ಆದರೆ ನಮ್ಮ ಮೆಟ್ರೋ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ನಮ್ಮ ಮೆಟ್ರೋ ಸಿಬ್ಬಂದಿ ಮಹಿಳೆ ಎದುರು ಫ್ಲಾಟ್ ಫಾರ್ಮ್‌ನಲ್ಲೇ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗವನ್ನು ಮಹಿಳೆ ಎದುರು ಸ್ಪರ್ಶಿಸುತ್ತಾ ಅಸಭ್ಯವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Comments (0)

Your email address will not be published. Required fields are marked *

Back to top button