Wednesday, April 30, 2025
32 C
Bengaluru
LIVE
ಮನೆರಾಜಕೀಯಬಿಎಸ್​ವೈ ವಿರುದ್ಧ ಎಫ್​ಐಆರ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬಿಎಸ್​ವೈ ವಿರುದ್ಧ ಎಫ್​ಐಆರ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು; ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಮಾತನಾಡಿದ ಪರಮೇಶ್ವರ್‌, ವಶಕ್ಕೆ ಪಡೆಯುವ ಸಂಬಂಧ ತನಿಖೆ ನಂತರ ನಿರ್ಧಾರ ಮಾಡಲಾಗುವುದು ಎಂದರು.ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.

ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments