Wednesday, April 30, 2025
24.6 C
Bengaluru
LIVE
ಮನೆರಾಜಕೀಯವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು: ಸಿಎಂ ಸಿದ್ದರಾಮಯ್ಯ

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ. 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು.

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments