ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೇಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾವೇರಿ ನೀರು ಬಂದ್ರು ನಗರದ ಗಲ್ಲಿ ಗಲ್ಲಿಗಲ್ಲಿ ನೀರು ಸಿಗುತ್ತಿಲ್ಲ.ತೀವ್ರ ಬಾರದಿಂದ ಬೋರ್‌ವೇಲ್‌ಗಳು ಬತ್ತಿ ಹೋಗಿವೆ..ಇರೋ ಬೋರ್‌ವೆಲ್ ಗಳಲ್ಲಿ ದಿನೇದಿನೇ ನೀರು ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಬೇಸಿಗೆಯನ್ನ ಎದುರಿಸೋದುಇ ಸರ್ಕಾರಕ್ಕೆ ಸವಾಲಾಗಿದೆ ಮುಂದಿನ ದಿನಗಳಲ್ಲಿ ಎದುರಾಗುವ ಸಮಸ್ಯೆಯನ್ನ ಅರೆತುಕೊಂಡಿರುವ ಸರ್ಕಾ ಈಗ್ಲೇ ಎಚ್ಚತ್ತುಕೊಳ್ಳುತ್ತಿದೆ. ಬೆಂಗಳೂರು ನಗರದಲ್ಲಿ “ನೀರು ಉಳಿಸಿ ಬೆಂಗಳೂರು ಬೆಳಸಿ”ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ.ಇಂದು ಡಿಕೆ ಶಿವಕುಮಾರ್ ವಿಧಾನಸೌದ ಮುಂಭಾಗ ನೂತನ ಆಭಿಯಾನಕ್ಕೆ ಚಾಲನೆ ಕೊಟ್ಟು ಬರ ಪರಿಸ್ಥಿತಿಯಲ್ಲಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಜನರಿಗೆ ಸಮಸ್ಯೆ ಆಗದಂತ ರೀತಿಯಲ್ಲಿ ಹೊಸ ಆಪ್‌ಗಳನ್ನ ಬಿಡುಗಡೆ ಮಾಡಿದ್ರು. ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ಆಪ್ ಗಳನ್ನು ಬಿಡುಗಡೆ ಮಾಡಿ ಬೆಂಗಳೂರು ನಗರ ಈ ವರ್ಷ ಮಳೆ ಇಲ್ಲದೆ ತತ್ತರಿಸುತ್ತಿದೆ. ಬೆಂಗಳೂರಿನಲ್ಲಿ 6,900 ಕೊಳವೆ ಬಾವಿಗಳು ಬತ್ತಿದ್ದು, ಉಳಿದ 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಹೀಗಾಗಿ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಹೊಸ ಕೊಳವೆ ಬಾವಿ ಕೊರೆಯಲು ಅನುಮತಿ ನೀಡಬೇಕು. ಆ ಕೊಳವೆ ಬಾವಿಗಳ ನೀರನ್ನು ಸರಿಯಾಗಿ ನಿಯಂತ್ರಿಸಿ ಸದ್ಬಳಕೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಯಾರೇ ಹೊಸ ಕೊಳವೆಬಾವಿ ಕೊರೆಯುವಾಗ ಬಿಡಬ್ಲ್ಯೂಎಸ್ಎಸ್ ಬಿಯಿಂದ ಅನುಮತಿ ಪಡೆಯಬೇಕಾಗಿದೆ. ಇದರಲ್ಲಿ ಹೆಚ್ಚುವರಿ ನೀರನ್ನು ಸರ್ಕಾರ ಯಾರಿಗೆ ಹಂಚಿಕೆ ಮಾಡಬೇಕು ಎಂದು ತೀರ್ಮಾನಿಸಲು ಹಾಗೂ ನೀರಿನ ಸಮರ್ಪಕ ಬಳಕೆಗೆ ಈ ಆಪ್ ತರಲಾಗಿದೆ.ಕಳೆದ ಹತ್ತು ವರ್ಷಗಳಿಂದ ನೀರಿನ ದರವನ್ನ ಏರಿಕೆ ಮಾಡಿಲ್ಲ. ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ದಿನದಿಂದಲೇ ಬಿಡಬ್ಲ್ಯೂಎಸ್ಎಸ್ ಬಿಗೆ ಶಕ್ತಿ ತುಂಬಲು ತೀರ್ಮಾನಿಸಿದ್ದೇನೆ. ಲೋಕಸಭೆ ಚುನಾವಣೆ ನಂತರ ನಾವು ನಮ್ಮದೇ ಆದ ತೀರ್ಮಾನ ಮಾಡಲಿದ್ದೇವೆ. ದೂರದೃಷ್ಟಿಯಿಂದ ನಾವು ಈ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಇನ್ನು “ನೀರು ಉಳಿಸಿ ಬೆಂಗಳೂರು ಬೆಳಸಿ” ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಮನಗೂಳಿ, ಬಸವರಾಜ್ ಶಿವಗಂಗಾ, ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರರಾವ್, ಬೆಂಗಳೂರು ಜಲಮಂಡಳಿಯ ಎಂಜನಿಯರ್‌ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು..