ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೊಷಣೆ ಕೂಗಿದ ಪ್ರಕರಣದ ಆರೋಪಿ ಮೊಹಮ್ಮದ್ ಶಫಿ ನಾಶಿಪುಡಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಒಬ್ಬ ಆರೋಪಿಯನ್ನ ಹೆಚ್ಚಿನ ವಿಚಾರಣೆಗೆ ಮತ್ತೆ ಮಾರ್ಚ್ 7 ತನಕ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ವಿಧಾನಸೌಧ ಪೊಲೀಸರು ಬುಧವಾರ ಎಸಿಎಮ್ಎಮ್ ನ್ಯಾಯಾಲಯ ಮುಂದೆ ಮೂವರನ್ನು ಹಾಜರು ಪಡಿಸಿದ್ದರು. ಇದರಲ್ಲಿ ಆರ್ ಟಿ ನಗರದ ಮುನ್ನಾವರ್ ಮತ್ತು ದೆಹಲಿ ಮೂಲದ ಮೊಹಮ್ಮದ್ ಇಲ್ಲಾತಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮತ್ತೊಬ್ಬ ಆರೋಪಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಗುರುವಾರದವರೆಗು ಕಸ್ಟಡಿಗೆ ಪಡೆಯಲಾಗಿದೆ. ನೆನ್ನೆಯಿಂದ ನಾಶಿಪುಡಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ವಿಧಾನಸೌಧ ಠಾಣಾ ಪೊಲೀಸರು ಇಂದು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.