ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್” ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗ ಡಿ.ಕೆ ಶಿವಕುಮಾರ್ ರವರು ಲೋಕಾರ್ಪಣೆಗೊಳಿಸಿದ್ದಾರೆ.
ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ ರೇವಣ್ಣ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೇರಿದಂತೆ ಇನ್ನಿತರರು ಈ ವೇಳೆ ಉಪಸ್ಥಿತರಿದ್ದರು.