ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್‌ಗೆ ಬಿಗ್ ರಿಲೀಫ್ ಸಿಕ್ಕಿದೆ..ರಾಕ್ ಲೈನ್ ಮಾಲ್ಗೆ ಬೀಗ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ರಾಕ್ ಲೈನ್ ಮಾಲ್ಗೆ ಬೀಗ ಹಾಕಿರುವುನ್ನು ಪ್ರಶ್ನಿಸಿ ರಾಕ್ ಲೈನ್ ವೆಂಕಟೇಶ್ ಹೈಕೋರ್ಟ್ ಮೇಟ್ಟಿಲೇರಿದ್ದರು. ಈಗ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ BBMP ಅಧಿಕಾರಿಗಳು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ರಾಕ್ ಲೈನ್ ಮಾಲ್ಗೆ ಬೀಗ ಹಾಕಿತ್ತು. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ರಾಕ್ ಲೈನ್ ಮಾಲ್ಗೆ ಬೀಗ ಹಾಕಿದ್ದರು.
ರಾಕ್ಲೈನ್ ಮಾಲ್ 2011 ರಿಂದ 2022-23 ರವರೆಗೆ ಒಟ್ಟು 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿತ್ತು. ಹಲವು ವರ್ಷದಿಂದ ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳು ಅನೇಕ ಬಾರಿ ನೋಟಿಸ್ ನೀಡಿದ್ದರು. ಆದರೆ ನೋಟಿಸ್ ನೀಡಿದರೂ ತೆರಿಗೆ ಹಣ ಪಾವತಿಸದ ಕಾರಣ ಬಿಬಿಎಂಪಿ ಕಂದಾಯ ಅಧಿಕಾರಿಗಳು ರಾಕ್ ಲೈನ್ ಮಾಲ್ ಸೀಜ್ ಮಾಡಿದ್ದರು.
ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಈ ಕ್ರಮ ಪ್ರಶ್ನಿಸಿ ರಾಕ್ ಲೈನ್ ವೆಂಕಟೇಶ್ ಹೈಕೋರ್ಟ್ ಮೇಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆದಿದ್ದು, ರಾಕ್ ಲೈನ್ ಮಾಲ್‌ನಲ್ಲಿ ವ್ಯಾಪಾರಕ್ಕೆ ತೊಂದರೆ ಮಾಡಬಾರದು ಹಾಗೂ ಆಸ್ತಿ ತೆರಿಗೆ ಪಾವತಿಸದೆ ಬಗ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ಹೈ ಕೋರ್ಟ್ ಬಿಬಿಎಂಪಿ ಕಂದಾಯ ಅಧಿಕಾರಿಗಳಿಗೆ ಆದೇಶ ನೀಡಿದೆ.