ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಸ್ ಮಾಜಿ ಸ್ಫರ್ಧಿ, ಟಿಕ್ ಟಾಕ್ ಸ್ಟಾರ್ ಸೋನುಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಗೌಡರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧಿಸಲಾಗಿದೆ. ಜೆಜೆ ಕಾಯ್ದೆ ಅಡಿಯಲ್ಲಿ ಸೋನು ಗೌಡ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


