ಬೆಂಗಳೂರು : ಇಡೀ ದೇಶವೇ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಹತ್ತಿರವಾಗುತ್ತಿದೆ. ಇಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಉತ್ತರಾದಿ ಮಠದ ಸಂಚಾಲಕರಾದ ಸತ್ಯಧ್ಯಾನ ಆಚಾರ್ಯ ಕಟ್ಟಿ, ಡಾ. ಜಯಶ್ರೀ ಅರವಿಂದ ಹಾಜರಿದ್ದರು.