ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿರುತ್ತದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ತಿಳಿಸಿದ್ದಾರೆ.

ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಲಹಾ ರೂಪದ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಮಂಡಳಿಯು ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಈ ಸಂದರ್ಭದಲ್ಲಿ ಮನೋರಂಜನೆಯಾಗಿ ವಾಣಿಜ್ಯ ಉದ್ದೇಶದಿಂದ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಸಮಂಜಸವಾಗಿರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮನೋರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವಂತಹ ರೈನ್ ಡ್ಯಾನ್ಸ್, ಪೂಲ್‌ ಡ್ಯಾನ್ಸ್‌ ಗಳಿಗೆ ಸಾರ್ವಜನಿಕ ಹಿತದೃಷ್ಠಿಯಿಂದ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಈ ಮೂಲಕ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

Verified by MonsterInsights