Freedom TV

ವಿವಾಹ ವಾರ್ಷಿಕೋತ್ಸವಕ್ಕೆ ಗಿಫ್ಟ್​ ಕೊಡದ ಗಂಡ ; ಮಧ್ಯರಾತ್ರಿ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಗಂಡ ಗಿಫ್ಟ್ ಕೊಟ್ಟಿಲ್ಲ ಎಂದು ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಫೆ.27 ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮದುವೆ ವಾರ್ಷಿಕೋತ್ಸವ ಹಿನ್ನೆಲೆ ಗಂಡ ನಿದ್ದೆಗೆ ಜಾರಿದ್ದನು. ಇದರಿಂದ ಕೋಪಗೊಂಡಿದ್ದ ಹೆಂಡತಿ ಮಧ್ಯರಾತ್ರಿ 1:30 ರ ಸುಮಾರಿಗೆ ಚಾಕುವಿನಿಂದ ಇರಿದಿದ್ದಾಳೆ. ಗಂಡ ಮಲಗಿ ನಿದ್ದೆ ಮಾಡುತ್ತಿದ್ದ ವೇಳೆ ಅಡುಗೆ ಮನೆಯಿಂದ ಚಾಕು ತಂದ ಪತ್ನಿ ಆತನಿಗೆ ಇರಿದಿದ್ದಾಳೆ. ಚಾಕುವಿನಿಂದ ಇರಿದ ಹಿನ್ನೆಲೆ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಗಂಡ ಮತ್ತು ಹೆಂಡತಿಯನ್ನು ಪೊಲೀಸರು ಕೌನ್ಸಲಿಂಗ್ ನಡೆಸಿದ್ದಾರೆ. ತನಿಖೆ ವೇಳೆ ಮೊದಲ ಬಾರಿಗೆ ಗಿಫ್ಟ್ ನೀಡಿಲ್ಲ ಎಂಬ ಸಂಗತಿ ಬಯಲಾಗಿದೆ. ಹೀಗಾಗಿ ಕೃತ್ಯವೆಸಗಿರುವುದಾಗಿ ಹೆಂಡತಿ ಒಪ್ಪಿಕೊಂಡಿದ್ದಾಳೆ. ಆದರೆ ಗಂಡ ತನ್ನ ತಾತ ತೀರಿ ಹೋಗಿದ್ದ ಕಾರಣ ಗಿಫ್ಟ್ ನೀಡಲು ನಿರಾಕರಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

Comments (0)

Your email address will not be published. Required fields are marked *

Back to top button