ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ.
ಶೇಡಬಾಳ ಗ್ರಾಮದಿಂದ ಕೆಲಸಕ್ಕೆಂದು ಹೊರಟಿದ್ದ ನಾಲ್ಕು ಪಾದಚಾರಿಗಳ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲಿಯೇ ಮೂವರು ಮಹಿಳಾಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರನ್ನು ಶೇಡಬಾಳ ಗ್ರಾಮದ ಚಂಪಾ ಲಕ್ಕಪ್ಪ ತಳಕಟ್ಟಿ ವಯಸ್ಸು (45), ಭಾರತಿ ವಡ್ಡಾಳೆ ವಯಸ್ಸು (30), ಮಾಲು ರಾವಸಾಬ ಐನಾಪುರೆ ವಯಸ್ಸು (55) ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶೇಕವ್ವ, ನರಸಪ್ಪ. ಸರಸಾಯಿ ಎಂಬುವವರನ್ನು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮೀರಜ್ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ, ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಬಳಿಕ ಅಪಘಾತ ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.