ಬೆಳಗಾವಿ : ರಾಜ್ಯದಲ್ಲಿ ಕೆರೆಗೋಡು ಧ್ವಜ ವಿವಾದ ಬಳಿಕ ಬೆಳಗಾವಿಯ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವುಗೊಳಿಸಲಾಗಿದೆ. ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದು ಸಂಘಟನೆಗಳು ಪಾದಯಾತ್ರೆ ಕೈಗೊಂಡಿದ್ದಾರೆ.
ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಚಲೋ ಎಂಕೆ ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದು ಪರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಇಡೀ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನವೂ ಕೈಗೊಳ್ಳಲು ಮುಂದಾಗಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.
ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಧ್ವಜ ತೆರವು ಹಿನ್ನೆಲೆ ಹನುಮಾನ್ ಮಂದಿರದ ಮುಂದೆ ಬಗವಾ ಧ್ವಜ ಹಾರಿಸಲು ಹಿಂದೂ ಸಂಘಟನೆಗಳಿಂದ ಕರೆ ನೀಡಲಾಗಿದ್ದು, ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಹಿಂದೂ ಯುವಕರು ಜಮಾಯಿಸಿದ್ದಾರೆ. ಅಲ್ಲದೆ ಗ್ರಾಮದ ಸಂಬ್ಬನವರ್ ಕಾಲೋನಿಯಲ್ಲಿ ಧ್ವಜ ಕಟ್ಟೆ ನಿರ್ಮಾಣ ಮಾಡಲು ಮುಂದಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.