ರಾಜ್ಯಸುದ್ದಿ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದ ಕಾರ್ಯಕರ್ತರು

ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದರು.

ಸಂಸದ ಡಿಕೆ ಸುರೇಶ್​​ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಕೊನೆಗೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್​ ಕಛೇರಿಯಿಂದ ಎಳೆದು ತಂದರು.

ಬಳಿಕ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನಾ ಸ್ಥಳಕ್ಕೆ ಬಂದ ಕಾಂಗ್ರೆಸ್​​ ಮುಖಂಡ ಮಲ್ಲಿಕಾರ್ಜುನ್​ ಆಗಮಿಸಿದ್ದು, ಬಿಜೆಪಿಗರ ಎದುರೇ ಪ್ರಧಾನಿ ನರೇಂದ್ರ ಮೋದಿಗೆ ಧಿಕ್ಕಾರ ಎಂದು ಕೂಗಿದರು. ಕೊನೆಗೆ ಪೊಲೀಸರು 30 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Comments (0)

Your email address will not be published. Required fields are marked *

Back to top button