ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದರ ನಿಮಿತ್ತ, ಇಂದು ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ ಹೂಗುಚ್ಚ ನೀಡಿ ಗೌರವಿಸಿದರು.

ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಮ್ಮ ಮಗಳಿಗೆ ಟಿಕೆಟ್ ನೀಡಿರುವುದಕ್ಕೆ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಧನ್ಯವಾದ ಸಲ್ಲಿಸಿದರು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೈಕಮಾಂಡ್ ಹಾಕಿಕೊಂಡಿದ್ದು, ಹೈಕಮಾಂಡ್‍ನ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಮೃಣಾಲ್ ಹೆಬ್ಬಾಳ್ಕರ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಂಕಾ ಜಾರಕಿಹೊಳಿ ಮಣೆ ಹಾಕಲಾಗಿದೆ. ಇದರ ನಿಮತ್ತ ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಸಿಎಂ ಜೊತೆ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಿದರು.
ಅಲ್ಲದೇ ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ, ಕುರುಬ ಸಮುದಾಯದ ಹಿರಿಯ ನಾಯಕ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ, ಮುಖ್ಯಮಂತ್ರಿ ಸಿದ್ರಾಮಯ್ಯ ಅವರಿಗೆ ನೂತನ ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಹುಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಾಸಕರಾದ ರಾಜು ಸೇಠ್, ವಿಶ್ವಾವ ವೈಧ್ಯ, ಮಹೇಂದ್ರ ತಮ್ಮನವರ, ಗಣೇಶ ಹುಕ್ಕೇರಿ, ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ, ರಾಜು ಕಾಗೆ, ಮಾಜಿ ಶಾಸಕಿ ಅಂಜಲಿ ನಿಂಬಾಳಕರ, ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷದೆ ಕಲ್ಪನಾ ಜೋಶಿ, ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹನಮಣ್ಣವರ, ಮಹಾವೀರ ಮೊಹಿತೆ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


