ಬೀದರ್: ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಕೈ ಪಡೆ ಮೊದಲ ಪಟ್ಟಿಯಲ್ಲಿ 15 ಲೋಕಸಭಾ ಕ್ಷೇತ್ರಗಳ ಪಟ್ಟಿಯನ್ನ ಘೋಷಿಸಲಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಬೀದರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇನ್ನು ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್.ಎಸ್.ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ. ತನಿಖೆ ಜಾರಿಯಲ್ಲಿದೆ ಎಂದು ಸಿಎಂ ತಿಳಿಸಿದರು.
ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.