ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯ ಗಡಿ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ.
ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 18 ಚೆಕ್ಪೋಸ್ಟ್ಗಳು ಹಾಗೂ ಬೀದರ್ ತಾಲೂಕಿನ ಶಹಾಪುರ ಗೇಟ್ ಬಳಿಯೂ ಪ್ರತಿ ವಾಹನಗಳನ್ನ ಸಿಬ್ಬಂದಿ ತಪಾಸಣೆ ಮಾಡಲಾಗಿದ್ದು, ನೆರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರತಿ ವಾಹನಗಳನ್ನ ಸಿಬ್ಬಂದಿ ತಪಾಸಣೆ ನಡೆಸಲಾಗುತ್ತಿದೆ. ಪ್ರತಿ ಚೆಕ್ಪೋಸ್ಟ್ಗಳಲ್ಲಿ ಎರಡು ಸಿಸಿಟಿವಿ ಕ್ಯಾಮೆರಾ ಅಳವಡಿಸಿ ತೀವ್ರ ನಿಗಾ ವಹಿಸಿಲಾಗಿದೆ.
ಬಸ್, ಕಾರ್ ಸೇರಿದಂತೆ ಎಲ್ಲ ವಾಹನಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರತಿ ಚೆಕ್ಪೋಸ್ಟ್ಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ, ಅಬಕಾರಿ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿಯಿಂದ ವಾಹನಗಳ ನಂಬರ್ ದಾಖಲಿಸಿ ತಪಾಸಣೆ ಮಾಡಲಾಗಿದೆ.