ಬೀದರ್ : ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರೋ ಶ್ರೀರಾಮನ ಭವ್ಯ ಮಂದಿರದಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನ ಔರಾದ್ ಶಾಸಕ ಪ್ರಭು ಚೌಹಾಣ್ ಮನೆ ಮನೆಗೆ ತೆರಳಿ ವಿತರಿಸಿದರು.
ಔರಾದ್ ತಾಲೂಕಿನ ತಾಂಡಾ ನಿವಾಸದಲ್ಲಿ ಶ್ರೀರಾಮ ಭಾವಚಿತ್ರ ಹಾಗೂ ರಾಮಭಕ್ತರಿಂದ ಸ್ವೀಕರಿಸಿದ ಮಂತ್ರಾಕ್ಷತೆಗೆ ಪೂಜೆ ನೆರವೇರಿಸಿ ಔರಾದ್ ಪಟ್ಟಣಕ್ಕೆ ಆಗಮಿಸಿ ಮನೆ ಮನೆಗೆ ತೆರಳಿ ವಿತರಿಸಿದ್ರು.
ಈ ವೇಳೆ ಮಾತನಾಡಿದ ಶಾಸಕ ಪ್ರಭು ಚೌಹಾಣ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬುದು ಕೋಟ್ಯಂತರ ಹಿಂದುಗಳ ಅನೇಕ ವರ್ಷಗಳ ಕನಸಾಗಿತ್ತು. ಈ ಕನಸು ಈಗ ಸಾಕಾರಗೊಳ್ಳುತ್ತಿದೆ. ರಾಮಜನ್ಮ ಭೂಮಿ ಆಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ನಿರ್ಮಾಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದೆ. ಅಂದು ದೇಶದ ಎಲ್ಲ ಕಡೆಗಳಲ್ಲಿ ವಿಶೇಷ ಕಾರ್ಯಕ್ರಮಗಳು, ಪೂಜೆ, ಅರ್ಚನೆ, ಹೋಮ-ಹವನ, ಸತ್ಸಂಗ, ಭಜನೆಯಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.