ರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್‌ಗೆ ಗೋ ಶಾಪ ತಟ್ಟುತ್ತೆ ; ಮಾಜಿ ಸಚಿವ ಪ್ರಭು ಚೌಹಾಣ್

ಬೀದರ್ : ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಯೋಜನೆಗಳು ಬಂದ್ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

ಪಶು ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಬಿಜೆಪಿ ಮುಖಂಡರು ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿ ಗೋವುಗಳನ್ನ ಕಸಾಯಿ ಖಾನೆಗೆ ಹಾಕಲಾಗುತ್ತಿದೆ ಆದರೂ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬಿಜೆಪಿ ಸರ್ಕಾರದ ವೇಳೆ ಪಶು ಸಂಗೋಪನೆ ಇಲಾಖೆ ಜಾರಿಗೊಳಿಸಿದ ಎಲ್ಲಾ ಯೋಜನೆಗಳು ಸ್ಥಗಿತಗೊಳಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಪ್ರಭು ಚೌಹಾಣ್ 6 ಕೋಟಿ ಜನರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮೂಕಪ್ರಾಣಿಗಳಿಗೆ ಮೋಸ ಮಾಡುತ್ತಿದೆ ಕೆಲವೆ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ, ನಮ್ಮ ಸರ್ಕಾರದ ವೇಳೆ ಜಾರಿಯಾಗಿದ್ದ ಪಶು ಸಂಜೀವಿನಿ ಆ್ಯಂಬುಲೆನ್ಸ್ ಸೇವೆ, ಕಸಾಯಿ ಖಾನಾ ಓಪನ್ ಮಾಡಿದ್ದಾರೆ. ಪ್ರಾಣಿ ಸಹಾಯವಾಣಿ ಕೇಂದ್ರ ಸೇರಿದಂತೆ ಬಹುತೇಕ ಎಲ್ಲಾ ಯೋಜನೆಗಳಿಗೆ ಸರ್ಕಾರ ಮುನ್ನಡೆಸುಕೊಂಡು ಹೋಗುತ್ತಿಲ್ಲ. ಇಲ್ಲಿವರೆಗೂ ಪಶು ಸಂಗೋಪನೆ ಇಲಾಖೆಯಿಂದ ಒಂದೇ ಒಂದು ಮೀಟಿಂಗ್ ಮಾಡಲು ಪಶು ಖಾತರ ಸಚಿವರಿಂದ ಆಗಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಗೋ ಮಾತೆಯ ಶಾಪ ತಟ್ಟಲಿದೆ ಎಂದರು.

 

Comments (0)

Your email address will not be published. Required fields are marked *

Back to top button