ಬೀದರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಸ್ಸಾಂ ಬಿಜೆಪಿ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ರಾಹುಲ್ ಗಾಂಧಿ ಅವರ ಭಾರತ್ ಜೊಡೊ ನ್ಯಾಯ ಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ. ಹಾಗಾಗಿ ಕಾಂಗ್ರೆಸ್ ಯಾತ್ರೆಗೆ ಭಂಗ ಉಂಟು ಮಾಡಬೇಕು ಎಂದು ಕಿಡಗೇಡಿ ಕೆಲಸವನ್ನ ಬಿಜೆಪಿಯವರು ಮಾಡಿದ್ದಾರೆ. ಗೂಂಡಾ ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.