ಕ್ರೈಂ ಸ್ಟೋರಿರಾಜ್ಯಸುದ್ದಿ

97 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

ಬೀದರ್: ಬಡಜನರಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 3 ಲಾರಿ ಹಾಗೂ ಒಂದು ಗೂಡ್ಸ್ ವಾಹನ ಸೇರಿ ಒಟ್ಟು 97 ಲಕ್ಷ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.

ಬೀದರ್ ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ, ಹುಮನಾಬಾದ್ ಪೊಲೀಸ್ ಠಾಣೆ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮೂರು ಪ್ರಕರಣಗಳಿಂದ ಆರು ಜನ ಆರೋಪಿತರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಅರೋಪಿಗಳಿಂದ 30 ಲಕ್ಷ 78 ಸಾವಿರ ಮೌಲ್ಯದ 904 ಕ್ವಿಂಟಲ್ ಅಕ್ಕಿ ಮತ್ತು 62 ಲಕ್ಷ ಮೌಲ್ಯದ 3 ಲಾರಿ ಹಾಗು 1 ಗೂಡ್ಸ್ ವಾಹನವನ್ನ ವಶ ಪಡಿಸಿಕೊಂಡಿದ್ದಾರೆ.

ಒಟ್ಟು ಆರು ಆರೊಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಉದಗೀರ್ ಹಾಗೂ ಗುಜರಾತ್‌ ರಾಜ್ಯಕ್ಕೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಬೀದರ್ ಪೊಲೀಸರು ಆರು ಜನ ಪೊಲೀಸರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಭಾಗಿಯಾದ ಪೊಲೀಸರಿಗೆ ಎಸ್‌ಪಿ ಚನ್ನಬಸವಣ್ಣ ಲಂಗೋಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button