ಸುದ್ದಿ

ಭೀಕರ ಅಪಘಾತ : 7 ಮಂದಿ ದುರ್ಮರಣ

ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಖಗಾರಿಯಾದಲ್ಲಿ ನಡೆದಿದೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರಾಕ್ಟರ್​ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿ 7 ಮಂದಿ ಸಾನ್ನಪ್ಪಿದ್ದಾರೆ.

ಚೌತಮ್​​ ಬ್ಲಾಕ್​​ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ಅಪಘಾತ NH-31 ನಲ್ಲಿ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದ ನಡೆದ ಸ್ಥಳಕ್ಕೆ ಆಗಮನಿಸಿದ ಪೊಲೀಸರು ಗಾಯಾಳುಗಳನ್ನು ಹೊರ ತೆಗೆದಿದ್ದಾರೆ. ಪಸ್ರಾಹ ಪೊಲೀಸ್​​ ಠಾಣೆ ವ್ಯಾಪ್ತಿಯ​ ಬಳಿ ಈ ಅಪಘಾತ ಸಂಭವಿಸಿದೆ.

Comments (0)

Your email address will not be published. Required fields are marked *

Back to top button