ದೇಶದಲ್ಲೇ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿ ಬಂಧನದಲ್ಲಿದ್ದ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್.ಸಂತೋಷ್ ಕುಮಾರ್ ಗೆ ನ್ಯಾಯಾಲಯ ಜಾಮೀನು ನೀಡಿದೆ.
ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು ಸಾಕ್ಷ್ಯ ನಾಶದ ಆರೋಪದಡಿ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್ .ಸಂತೋಷ್ ರವರ ಮೇಲೆ ಎಫ್ ಐಆರ್ ದಾಖಲಿಸಿ ಬಂಧಿಸಿದ್ದರು. ಈ ಇಬ್ಬರೂ ಆರೋಪಿಗಳ ವಿಚಾರಣೆ ನಡೆಸಿದ ಬಳಿಕ ಎಸ್ ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಆರೋಪಿಗಳ ಪರ ವಕೀಲರಾದ ಶ್ಯಾಮ್ ಸುಂದರ್ ಹಾಗು ಡಿ.ಎಸ್. ಸುಧನ್ವರವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು .ಅರ್ಜಿಯ ವಿಚಾರಣೆ ನಡೆಸಿದ 52 ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಯಶವಂತಕುಮಾರ್, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ .ಜಾಮೀನು ಹಿನ್ನಲೆಯಲ್ಲಿ ಜನವರಿ 25 ರಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್ .ಸಂತೋಷ್ ಸೋಮವಾರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
https://www.youtube.com/watch?v=lhU5qaYik-g