ರಾಜಕೀಯರಾಜ್ಯಸುದ್ದಿ

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ

ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಅನ್ನು ಮಾಜಿ ಸಚಿವ ಡಾ.ಸುಧಾಕರ್ ಅವರಿಗೆ ನೀಡಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ನೀಡಿದೆ.ರಾಯಚೂರು ಲೋಕಸಭಾ ಕ್ಷೇತ್ರದ ಟಿಕೇಟ್ ರಾಜಾ ಅಮರೇಶ್ವರ ನಾಯಕ ಹಾಗು ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಟಿಕೇಟ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಲಾಗಿದೆ.

ಇನ್ನುಳಿದಂತೆ ಮಂಡ್ಯ ಹಾಗು ಚಿತ್ರದುರ್ಗ ಕ್ಷೇತ್ರಗಳ ಟಿಕೆಟ್ ಘೋಷಿಸದೇ ಇರುವುದು ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಚಿಕ್ಕಬಳ್ಳಾಪುರ ಲೋಕಸಭಾ ಟಿಕೇಟ್ ತಮ್ಮ ಮಗ ಅಲೋಕ್ ವಿಶ್ವನಾಥ್ ಗೆ ಅಥವಾ ತನಗೇ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದ ಶಾಸಕ ಎಸ್.ಆರ್.ವಿಶ್ವನಾಥ್ ಗೆ ಕಡೆಗೂ ಟಿಕೇಟ್ ಮಿಸ್ ಆಗಿರೋದು ಶಾಕ್ ಕೊಟ್ಟಿದೆ.

 

 

Comments (0)

Your email address will not be published. Required fields are marked *

Back to top button